ಮೈಸೂರು: ಅನ್ನಭಾಗ್ಯ ಯೋಜನೆಯ (Anna Bhagya Scheme) ಅಕ್ಕಿ ಅಕ್ರಮವಾಗಿ ಮಾರಾಟ ಮಾಡಿದರೆ ಪಡಿತರ ಚೀಟಿಯನ್ನೇ ರದ್ದು ಮಾಡುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಎಚ್ಚರಿಕೆ ನೀಡಿದ್ದಾರೆ. ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಮಾರಾಟವಾಗುತ್ತಿದೆ ಎಂಬ ಸುದ್ದಿ ಇತ್ತೀಚೆಗೆ ವ್ಯಾಪಕವಾಗಿ ಹರದಾಡುತ್ತಿದ್ದವು. ಆದರೆ, ಪಡಿತರ ಅಕ್ಕಿಯನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದೇವೆ.
ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಖರೀದಿಸುವವರ ಮೇಲೆ ಕೂಡ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.