ಬೆಂಗಳೂರು: ಯುವಕನೋರ್ವ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಫ್ಲೈ ಓವರ್ ಮೇಲಿಂದ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಈ ಘಟನೆ ಏರ್‌ಪೋರ್ಟ್ ರಸ್ತೆಯ (Airport Road) ಮಾಲ್ ಆಫ್ ಏಷ್ಯಾ (Mall Of Asia) ಮುಂಭಾಗದ ರಸ್ತೆಯಲ್ಲಿ ನಡೆದಿದೆ. ಹೆಬ್ಬಾಳದ (Hebbal) ಶಿವಶಂಕರ್ ಲೇಔಟ್ ನಿವಾಸಿ ಮುನಿರಾಜ್ (22) ಸಾವನ್ನಪ್ಪಿದ ವ್ಯಕ್ತಿ. ಈ ವ್ಯಕ್ತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.
ತಾಯಿಗೆ ಸ್ನೇಹಿತರನ್ನು ಭೇಟಿಯಾಗಿ ಬರುತ್ತೇನೆಂದು ಹೇಳಿ ಹೊರಟಿದ್ದ. ಫ್ಲೈಓವರ್ ಮೇಲೆ ಬೈಕ್ ನಿಲ್ಲಿಸಿ ಬಳಿಕ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಕೊಡಿಗೆಹಳ್ಳಿ (Kodigehalli) ಠಾಣೆಯಲ್ಲಿ ಯುಡಿಆರ್ (UDR) ದಾಖಲಾಗಿದೆ.