ಸೆಂಚುರಿ ನಾಟೌಟ್ : ಪೆಟ್ರೋಲ್ ಕಳ್ಳತನಕ್ಕಿಳಿದ ಯುವಕರು

1 min read
Patrol

ಸೆಂಚುರಿ ನಾಟೌಟ್ : ಪೆಟ್ರೋಲ್ ಕಳ್ಳತನಕ್ಕಿಳಿದ ಯುವಕರು

ಚಿಕ್ಕಬಳ್ಳಾಪುರ : ದೇಶದಲ್ಲಿ ಪೆಟ್ರೋಲ್ ಬೆಲೆ 100ರ ಗಡಿದಾಟಿ ಮುನ್ನುಗ್ಗುತ್ತಿದೆ. ಈ ಹಿನ್ನೆಲೆ ಹಲವು ಭಾಗಗಳಲ್ಲಿ ಪೆಟ್ರೋಲ್ ಕಳ್ಳತನ ಎಗ್ಗಿಲ್ಲದೇ ನಡೆಯುತ್ತಿದೆ.

ಇದಕ್ಕೆ ತಾಜಾ ಉದಾಹರಣೆ ಚಿಕ್ಕಬಳ್ಳಾಪುರ ನಗರದಲ್ಲಿ ಪೆಟ್ರೋಲ್ ಕಳ್ಳತನ ಮಾಡುವ ಹೊಸದೊಂದು ಗ್ಯಾಂಗ್ ಹುಟ್ಟಿಕೊಂಡಿದೆ.

Patrol

ನಗರದ ಮುನಿಸಿಪಾಲ್ ಬಡಾವಣೆಯಲ್ಲಿ ಮೂವರು ಯುವಕರು ಪೆಟ್ರೋಲ್ ಕಳ್ಳತನ ಮಾಡಿದ್ದಾರೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಮಧ್ಯರಾತ್ರಿ ಪಲ್ಸರ್ ಬೈಕ್ ನಲ್ಲಿ ಬಂದ ಮೂವರು ಯುವಕರು ಮನೆಗಳ ಮುಂದೆ, ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಗಳಲ್ಲಿ ಪೆಟ್ರೋಲ್ ಕಳ್ಳತನ ಮಾಡಿದ್ದಾರೆ.

ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳತರ ಪತ್ತೆಗೆ ಶೋಧ ಕಾರ್ಯ ಆರಂಭವಾಗಿದೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd