ಲಾಕ್ ಡೌನ್ ಕಾರಣಕ್ಕಾಗಿ ಶಾಲಾ – ಕಾಲೇಜುಗಳಿಗೆ ರಜೆ ನೀಡಲಾಗಿದೆ. ಹಾಗಾಗಿ ಶಾಲಾ ಮಕ್ಕಳು ಹೆಚ್ಚ ಸಮಯವನ್ನು ಮನೆಯಲ್ಲೇ ಕಳೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ಮತ್ತು ಪೋಷಕರಿಗೆ ಸಹಕಾರಿಯಾಗಲೆಂದು ಶಿಕ್ಷಣ ಇಲಾಖೆ ಹೊಸ ಪ್ರಯತ್ನಕ್ಕೆ ಮುಂದಾಗಿದೆ. ಮಕ್ಕಳಿಗೆ ಪಾಠದ ಜೊತೆ ಮನರಂಜನೆ ನೀಡಲು ಪ್ರಥಮ ಬಾರಿಗೆ ಶಿಕ್ಷಣ ಇಲಾಖೆ ಪ್ರಯೋಗಕ್ಕೆ ಮುಂದಾಗಿದೆ. ಮಕ್ಕಳ ಯುಟ್ಯೂಬ್ ಚಾನಲ್ ಪ್ರಾರಂಭಿಸಿ ಅವರಿಗೆ ಜ್ಞಾನದ ಜೊತೆ ಮನರಂಜನೆ ನೀಡಲು ಮಕ್ಕಳ ವಾಣಿ ಹೆಸರಿನಲ್ಲಿ ಯೂಟ್ಯೂಬ್ ಚಾನಲ್ ಶುರುವಾಗುತ್ತೇ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಶಾಲೆಗಳು ಇಲ್ಲದ ಕಾರಣ ಮನೆಯಲ್ಲಿ ಮಕ್ಕಳಿಗೆ ಬೇಸರವಾಗುತ್ತದೆ. ಹಾಗಾಗಿ. ಈ ಯೂಟ್ಯಬ್ ಚಾನಲ್ ಮೂಲಕ ಮಕ್ಕಳಿಗೆ ಉಪಯುಕ್ತ ಮಾಹಿತಿ ತಿಳಿಸುವುದು, ಮನರಂಜನಾ ಚಟುವಟಿಕೆಗಳನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಸುಮಾರು 1 ಗಂಟೆಗಳ ಕಾಲ ಕಾರ್ಯಕ್ರಮ ಆಯೋಜಿಸಲಾಗುವುದು. ಈ 1 ಗಂಟೆಗಳ ಕಾರ್ಯಕ್ರಮದಲ್ಲಿ ಹಾಡು, ನೃತ್ಯ, ಕ್ವಿಜ್, ವಿವಿಧ ಆಟ ಗಳಿರುತ್ತದೆ. ಶಿಕ್ಷಣ ಇಲಾಖೆಯ ಮುಖ್ಯ ಉದ್ದೇಶವೆಂದರೆ ಮಕ್ಕಳಿಗೆ ಮನರಂಜನೆಯ ಜೊತೆ ಜ್ಞಾನ ನೀಡುವುದಾಗಿದೆ. ಈ ವಿಭಿನ್ನ ಕಾರ್ಯಕ್ರಮದಲ್ಲೊ ಪೋಷಕರು ಪಾಲ್ಗೊಳ್ಳಬಹುದಾಗಿದೆ. ತಮ್ಮ ಚಟುವಟಿಕೆಯ ವಿಡಿಯೋ ತುಣುಕನ್ನು ರವಾನಿಸಿದರೆ, ಅದನ್ನು ಯೂಟ್ಯೂಬ್ ಚಾನಲ್ ನಲ್ಲಿ ಪ್ರಸಾರ ಮಾಡಲಾಗುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ ಕೊರೊನ ಸುದ್ದಿಯ ಸದ್ದೇ ಇದೆ. ಇದು ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ ಎಂಬ ಕಾರಣಕ್ಕೆ ಶಿಕ್ಷಣ ಇಲಾಖೆ ಯುಟ್ಯೂಬ್ ಚಾನಲ್ ಪ್ರಾರಂಭಿಸಿ ಜ್ಞಾನ ಮತ್ತು ಮನರಂಜನೆ ನೀಡಲು ಸಿದ್ದತೆ ನಡೆಸಿದೆ.
ಮಧ್ಯಪ್ರಾಚ್ಯ ಉದ್ವಿಗ್ನತೆ ಪರಿಣಾಮ: ತೈಲ ದರ ಬ್ಯಾರೆಲ್‌ಗೆ $120ಕ್ಕೆ ಏರಿಕೆ
ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಪರಿಣಾಮ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಒಂದೇ ದಿನದಲ್ಲಿ ಕಚ್ಚಾ ತೈಲದ ಬೆಲೆ ಸುಮಾರು 29% ಏರಿಕೆ ಕಂಡಿದ್ದು, ಜಾಗತಿಕ...








