ಸಾರಿಗೆ ನೌಕರರ ಪ್ರತಿಭಟನೆಯ ಸಮಯ ಸರಿಯಾದುದಲ್ಲ : ದತ್ತ
ಕಡೂರು : ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ಇದು ಪ್ರತಿಭಟನೆಯ ಸಮಯವಲ್ಲ ಎಂದು ಮಾಜಿ ಶಾಸಕ ವೈ ಎಸ್ ವಿ ದತ್ತ ಅಭಿಪ್ರಾಯಪಟ್ಟಿದ್ದಾರೆ.
ಕಡೂರು ಪಟ್ಟಣದ ಸಾರಿಗೆ ಬಸ್ ನಿಲ್ದಾಣದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ಇವರನ್ನು ವೈ ಎಸ್ ವಿ ದತ್ತ ಭೇಟಿ ಮಾಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಕಡೆಗಳಲ್ಲಿ ಕಾರ್ಮಿಕರು ಹೋರಾಟಕ್ಕೆ ಇಳಿದಿದ್ದಾರೆ.
ಬಸ್ ಬಂದ್ | ಬೌನ್ಸ್ ನಿಂದ ಬಂಪರ್ ಆಫರ್, ಇಂದು ಬೈಕ್ ಸೇವೆ ಫ್ರೀ..!
ಆದ್ರೆ ಪ್ರತಿಭಟನೆಗೆ ಇದು ಸರಿಯಾದ ಸಮಯವಲ್ಲ. ಕೊರೊನಾ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆ ನಷ್ಟದಲ್ಲಿದೆ. ಕಾರ್ಮಿಕರಿಗೆ ವೇತನ ಕೊಡಲು ಸಾಧ್ಯವಾಗುತ್ತಿಲ್ಲ.
ಆದರೂ ಸರ್ಕಾರ ನಿಗದಿತ ಸಮಯಕ್ಕೆ ವೇತನ ನೀಡುವುದರ ಮೂಲಕ ಕಾರ್ಮಿಕರಿಗೆ ಸ್ಪಂದಿಸಿದೆ ಎಂದು ತಿಳಿಸಿದರು.
ಸಾರಿಗೆ ಸಂಸ್ಥೆಯ ಕಾರ್ಮಿಕರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂಬುದು ಬಹುದಿನಗಳ ಬೇಡಿಕೆಯಾಗಿದೆ.
ಸಾರಿಗೆ ಸಚಿವರೊಂದಿಗೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಪ್ರಯತ್ನ ನಡೆಸಲು ಮಾತುಕತೆ ನಡೆಸಲು ಕಾರ್ಮಿಕ ಸಂಘಗಳಲ್ಲೂ ಸರ್ಕಾರಕ್ಕೆ ಗಡುವು ನೀಡಿ ಪ್ರತಿಭಟನೆ ವಾಪಸ್ ಪಡೆಯಬೇಕಿದೆ ಎಂದು ಹೇಳಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
https://www.youtube.com/watch?v=PJXAUYUadFg









