ರಾಷ್ಟ್ರಪತಿ ಚುನಾವಣೆ ರೇಸ್ ನಲ್ಲಿರುವ NDA ಅಭ್ಯರ್ಥಿ ದ್ರೌಪದಿ ಮುರ್ಮುಗೆ ಝಡ್ ಪ್ಲಸ್ ಭದ್ರತೆ..!!
1 min read
ರಾಷ್ಟ್ರಪತಿ ಚುನಾವಣೆಗೆ NDA ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರಿಗೆ ಕೇಂದ್ರ ಸರ್ಕಾರವು ಬುಧವಾರದಿಂದ ಅನ್ವಯವಾಗುವಂತೆ ಝಡ್ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ.
ಕೇಂದ್ರ ಸರ್ಕಾರವು ದ್ರೌಪದಿ ಮುರ್ಮುಗೆ ಕೇಂದ್ರ ಮೀಸಲು ಪೊಲೀಸ್ ಪಡೆಗಳಿಂದ (CRPF) ಝಡ್ ಪ್ಲಸ್ ಶ್ರೇಣಿಯ ಭದ್ರತೆ ಒದಗಿಸಿದೆ.
ಜಾರ್ಖಂಡ್‌ನ ರಾಜ್ಯಪಾಲರಾಗಿದ್ದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಚುನಾವಣೆಗೆ NDA ಅಭ್ಯರ್ಥಿಯನ್ನಾಗಿ ಬಿಜೆಪಿ ಮಂಗಳವಾರ ಘೋಷಿಸಿತ್ತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿತ್ತು.