“ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್” : JDS ವಾಗ್ದಾಳಿ…
ಒಂದು ಕಾಲದಲ್ಲಿ ಜೆಡಿಎಸ್ ಮತ್ತು ಕುಮಾರಸಸ್ವಾಮಿ ಗೆ ಆಪ್ತ ಮಿತ್ರನಾಗಿದ್ದ ಜಮೀರ್ ಅಹಮ್ಮದ್ ಇಂದು ಜೆಡಿಎಸ್ ನ ಪರಮ ಎದುರಾಳಿ… ಸಿಕ್ಕ ಸಿಕ್ಕ ಕಡೆಯಲೆಲ್ಲ ಜೆಡಿಎಸ್ ಮತ್ತು ಕುಮಾರಸ್ವಾಮಿ ಬಗ್ಗೆ ಹಗುರವಾಗಿ ಮಾತನಾಡುವ ಜಮೀರ್ ಬಾಯ್ ವಿರುದ್ಧ ಜೆಡಿಎಸ್ ಪಕ್ಷ ಇಂದು ತೀವ್ರ ವಾಗ್ದಾಳಿ ನಡೆಸಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರು JDS “ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?ರಾಜಕಾರಣಕ್ಕಾಗಿ ನೀವು ಆ ಸಮುದಾಯವನ್ನು ಹೇಗೆ ನಡೆಸಿಕೊಂಡಿದ್ದಿರಿ? ಶ್ರೀ ಹೆಚ್.ಡಿ.ದೇವೇಗೌಡರ ಕುಟುಂಬ ಹೇಗೆ ನಡೆಸಿಕೊಳ್ಳುತ್ತಿದೆ ಎನ್ನುವುದು ದೇಶಕ್ಕೇ ಗೊತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಚೆನ್ನಾಗಿರಲ್ಲ.
ಅರಮನೆಯಂಥ ವಿಲಾಸಿ ಭವನದಲ್ಲಿ ಐಷಾರಾಮಿ ಜೀವನ ನಡೆಸುವ ನಿಮಗೆ, ನಿಮ್ಮದೇ ಕ್ಷೇತ್ರದ ಗೌರಿಪಾಳ್ಯ, ಪಾದರಾಯನಪುರದ ಬಡ ಮುಸ್ಲಿಂ ಬಂಧುಗಳು ಎಂಥ ಕಷ್ಟದ ಸ್ಥಿತಿಯಲ್ಲಿ ಇದ್ದಾರೆ ಎನ್ನುವುದು ಗೊತ್ತಾ? ಕಾಮಾಲೆ ಕಣ್ಣಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಮೊಸಳೆ ಕಣ್ಣೀರು ಹಾಕುವ ನಿಮಗೆ ಮುಸ್ಲಿಮರ ನೈಜಸ್ಥಿತಿಯ ಬಗ್ಗೆ ಅರಿವಿದೆಯಾ?
ಹರಕಲು ನಾಲಿಗೆಯ ಜಮೀರ್, ಮುಸ್ಲಿಂ ಸಮುದಾಯಕ್ಕೆ ಸೇರಿದ ನಿಮಗೆ ರಾಜಕೀಯ ಜನ್ಮಕೊಟ್ಟಿದು ಇದೇ ಕುಮಾರಣ್ಣ.ವಿಧಾನ ಸಭೆಯ ಮಾರ್ಷಲ್ ಗಳು ಕುತ್ತಿಗೆಪಟ್ಟಿ ಹಿಡಿದು ಹೊರದಬ್ಬಿದಾಗ ಇದೇ ಕುಮಾರಣ್ಣ ನಿಮ್ಮ ಮಾನ ಕಾಪಾಡಿದ್ದು. ಅಂದು ಶಪಥಗೈದ ಕುಮಾರಣ್ಣ ನಿಮ್ಮನ್ನು ಶಾಸಕರನ್ನಾಗಿ ಮಾಡಿದ್ದು ನೆನಪಿಲ್ಲವೇ? ನಿಯತ್ತಿಲ್ಲದ ನಿಮಗೆ ಇದೆಲ್ಲಾ ಅರ್ಥವಾದೀತೆ?
ಉಂಡ ಮನೆಯ ಗಳ ಇರಿಯುವ ಜಮೀರ್, ಸಿಎಂ ಇಬ್ರಾಹಿಂ ಅವರ ರಾಜಕೀಯ ಹಿತದ ಬಗ್ಗೆ ಈಗ ನೆನಪು ಬಂತಾ ನಿಮಗೆ? ಹಿಂದೆ, ಇದೇ ಸಿಎಂ ಇಬ್ರಾಹಿಂ ಅವರನ್ನು ಅದೇ ನಿಮ್ಮ ನಾಯಕ ಶಿಕಾಮಣಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟಕ್ಕೆ ಯಾಕೆ ಸೇರಿಸಿಕೊಳ್ಳಲಿಲ್ಲ? ಹೋಗಲಿ, ಪ್ರತಿಪಕ್ಷ ನಾಯಕರನ್ನಾಗಿ ಮಾಡುವ ಅವಕಾಶವೂ ಇತ್ತು. ಅದನ್ನು ಮಾಡಲಿಲ್ಲ ಯಾಕಪ್ಪಾ ಜಮೀರ್?
ಇಬ್ರಾಹಿಂ ಅವರನ್ನು ನಾವು ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದ್ದೇವೆ. ಪಕ್ಷಕ್ಕೆ ಬಂದಾಗ ಪ್ರೀತಿಯಿಂದ ಬರ ಮಾಡಿಕೊಂಡಿದ್ದೇವೆ. ಈಗ ಅವರು ನಮ್ಮ ಅಧ್ಯಕ್ಷರು. ನಿಮ್ಮ ಗಂಜಿ ಕೇಂದ್ರವಾಗಿರುವ ಕಾಂಗ್ರೆಸ್ ಪಕ್ಷದಲ್ಲಿ ಓರ್ವ ಮುಸ್ಲಿಂ ನಾಯಕ ಪಕ್ಷದ ಅಧ್ಯಕ್ಷರಾಗುವುದು ಸಾಧ್ಯವೇ? ಕಾಮಾಲೆ ಕಣ್ಣಲ್ಲಿ ಕೆಂಡ ಸುರಿದುಕೊಂಡರೆ ಯಾರಿಗೆ ನಷ್ಟ ಜಮೀರ್?
ಇಬ್ರಾಹಿಂ ಅವರ ಪುತ್ರನ ಬಗ್ಗೆ ವಿಷಕಾರುವ ಕೆಟ್ಟ ಪ್ರಯತ್ನ ಮಾಡಿದ್ದೀರಿ. ಹುಮನಾಬಾದ್ ನಲ್ಲಿ ಯುವಕ ಸಿಎಂ ಫಯಾಜ್ ಗೆದ್ದೇ ಗೆಲ್ಲುತ್ತಾರೆ. ನಿಮಗೂ ಈ ವಿಷಯ ಚೆನ್ನಾಗಿ ಗೊತ್ತು. ಪಂಚರತ್ನ ರಥಯಾತ್ರೆ ಈ ಕ್ಷೇತ್ರದಲ್ಲಿ ಹೇಗೆ ಅಬ್ಬರಿಸಿತು ಎನ್ನುವ ಮಾಹಿತಿ ಪಡೆದುಕೊಳ್ಳಿ. ನಿಮ್ಮದೆ ಸಮುದಾಯದ ತರುಣನ ಮೇಲೆ ಈ ಪರಿಯ ಮತ್ಸರ ಏಕೆ ಜಮೀರ್?
ಇಬ್ರಾಹಿಂ ಅವರನ್ನು ಕಾಂಗ್ರೆಸ್ ಪಕ್ಷದಲ್ಲಿ ಮುಗಿಸಲು ಹೊರಟಿದ್ದು ಸುಳ್ಳಾ? ನಿಮ್ಮ ರೀತಿ ಇಬ್ರಾಹಿಂ ಅವರು ರಾಜಕೀಯದಲ್ಲಿ ಸಭ್ಯತೆಯ ಎಲ್ಲೆ ಮೀರಿದವರಲ್ಲ. ಆದರೆ, ಸಭ್ಯತೆಯ ಗಂಧಗಾಳಿ ಗೊತ್ತಿಲ್ಲದ ನಿಮಗೆ ರಾಜಕೀಯ ಜನ್ಮಕೊಟ್ಟ ಮಾತೃಪಕ್ಷದ ಬಗ್ಗೆ ಇರುವ ಮತ್ಸರ ನಿಮ್ಮ ಕೊಳಕು ಮನಃಸ್ಥಿತಿಗೆ ಹಿಡಿದ ಕನ್ನಡಿ.
ಇಬ್ರಾಹಿಂ ಅವರನ್ನು ಕಾಂಗ್ರೆಸ್ ನಲ್ಲಿ ಮುಗಿಸಲು ಷಡ್ಯಂತ್ರ ರೂಪಿಸಿದಂತೆ, ಈಗ ಅವರ ಮಗನ ವಿಷಯದಲ್ಲೂ ದುಷ್ಟತಂತ್ರ ಹೂಡಲು ಹೊರಟಿದ್ದೀರಿ. ಸಿದ್ದಹಸ್ತನ ಜತೆ ಸೇರಿ ಮುಸ್ಲಿಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಮುಗಿಸಿದ ಮಿಸ್ಟರ್ ಜಮೀರ್, ಮುಸ್ಲಿಂ ಸಮುದಾಯಕ್ಕೆ ನಿಮಗಿಂತ ದೊಡ್ಡ ಶತ್ರು ಬೇರೆ ಯಾರೂ ಇಲ್ಲ. ಸಮುದಾಯಕ್ಕೆ ಈ ಸತ್ಯ ಅರ್ಥವಾಗಿದೆ. ಎಂದು ಒಂದರ ಹಿಂದೊಂದರಂತೆ ಸರಣಿ ಟ್ವೀಟ್ ಮಾಡುವ ಮೂಲಕ JDS ಜಮೀರ್ ಅಹ್ಮದ್ ಗೆ ಟಕ್ಕರ್ ಕೊಟ್ಟಿದೆ…
Zameer Ahmed : JDS party a fierce attack against Jamir Ahmad.