ಮೈಸೂರು : ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಕರ್ನಾಟಕದ ಓವೈಸಿ ಆಗಲು ಹೊರಟಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ಗಲಭೆ ನಡೆದ ಎಲ್ಲಾ ಕಡೆ ಶಾಸಕ ಜಮೀರ್ ಅಹಮದ್ ಖಾನ್ ಯಾಕೆ ಹೋಗುತ್ತಾರೆ. ಇದನ್ನು ನಿಯಂತ್ರಣ ಮಾಡಲು ಕಾಂಗ್ರೆಸ್‍ಗೆ ಯಾಕೆ ಆಗುತ್ತಿಲ್ಲ ಎಂದು ಪ್ರಶ್ನಿಸಿ ಜಮೀರ್ ಕರ್ನಾಟಕದ ಓವೈಸಿ ಆಗಲು ಹೊರಟಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪುಂಡ ಮುಸಲ್ಮಾನರ ಹೆಸರು ಹೇಳದಂತೆ ಕಾಂಗ್ರೆಸ್ ಅಖಂಡ ಶ್ರೀನಿವಾಸ ಮೂರ್ತಿ ಅವರ ಮೇಲೆ ಒತ್ತಡ ಹಾಕುತ್ತಿದೆ ಎಂದು ಆರೋಪ ಮಾಡಿದ ಸಂಸದರು, ರಾಜ್ಯದಲ್ಲಿ ಉಗ್ರರ ಸ್ಲೀಪರ್ ಸೆಲ್ ಸಕ್ರಿಯವಾಗಿವೆ. ಹುಣಸೂರು, ಮೈಸೂರಿನಲ್ಲಿ ಇದ್ದಾರೆ. ಕೇರಳ ಮಾದರಿಯಲ್ಲಿ ರಾಜಕೀಯ ಹತ್ಯೆ ಎಸ್‍ಡಿಪಿಐ, ಕೆಎಫ್‍ಡಿ ಮೂಲಕ ರಾಜ್ಯಕ್ಕೆ ಕಾಲಿಟ್ಟಿದೆ. ಕಾಂಗ್ರೆಸ್ ನವರು ಇದನ್ನು ಮಟ್ಟ ಹಾಕುವ ಬದಲು ಪೋಷಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ.