ಮಾಜಿ ಸಚಿವ ಜಮೀರ್ ಖಾನ್ ಅವರು, ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ತಮ್ಮ ಹೆಸರು ಇರಬಹುದು ಎಂಬ ನಿರೀಕ್ಷೆ ವ್ಯಕ್ತಪಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೊದಲ ಪಟ್ಟಿಯಲ್ಲೇ ಸಚಿವ ಸ್ಥಾನ ಸಿಗುತ್ತದೆ ಎಂದು ನಿರೀಕ್ಷಿಸಿದ್ದೆ. ಆದರೆ ಅದು ಸಾಧ್ಯವಾಗಲಿಲ್ಲ. ಈ ಬಾರಿ ಎರಡನೇ ಪಟ್ಟಿಯಲ್ಲಿ ನನಗೆ ಅವಕಾಶ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.
ಇದೇ ವೇಳೆ, ದಾವಣಗೆರೆ ಉಪಚುನಾವಣೆ ಸಂದರ್ಭದಲ್ಲಿ ತಮ್ಮ ಹೆಸರಿನಲ್ಲಿ ಕೃತಕ ಬುದ್ಧಿಮತ್ತೆ (AI) ಬಳಸಿ ನಕಲಿ ಆಡಿಯೋ ಸೃಷ್ಟಿಸಿ, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದೇನೆ ಎಂದು ಅಪಪ್ರಚಾರ ಮಾಡಲಾಯಿತು ಎಂದು ಆರೋಪಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವು ಈಗಾಗಲೇ ಪೊಲೀಸರಿಗೆ ದೂರು ಸಲ್ಲಿಸಿದ್ದೇನೆ ಎಂದು ಜಮೀರ್ ಖಾನ್ ತಿಳಿಸಿದ್ದಾರೆ.








