ಹುಬ್ಬಳ್ಳಿ ಗಲಭೆ ಪ್ರಕರಣದಲ್ಲೂ ಜಮೀರ್ ಹೆಸರು ಕೇಳಿ ಬರುತ್ತಿದೆ : ಸಿ.ಟಿ. ರವಿ
ಚಿಕ್ಕಮಗಳೂರು: ಹುಬ್ಬಳ್ಳಿಯ ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲೂ ಜಮೀರ್ ಹೆಸರು ಕೇಳಿ ಬರುತ್ತಿದೆ ಎಂದು ಬಿಜೆಪಿ ರಾಷ್ಟ್ರ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಡಿಜೆಹಳ್ಳಿ-ಕೆಜೆಹಳ್ಳಿ, ಪಾದರಾಯನಪುರದಲ್ಲಿ ನಡೆದ ಗಲಭೆಯಲ್ಲೂ ಜಮೀರ್ ಅಹ್ಮದ್ ಖಾನ್ ಹೆಸರು ಕೇಳಿಬಂದಿತ್ತು. ಈಗ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲೂ ಕೇಳಿಬರುತ್ತಿದೆ. ಡಿಜೆಹಳ್ಳಿ-ಕೆಜೆಹಳ್ಳಿ, ಪಾದರಾಯನಪುರದಲ್ಲಿ ನಡೆದ ಗಲಭೆ ಹಿಂದೆ ಕಾಂಗ್ರೆಸ್ ಪಾತ್ರವಿತ್ತು. ಅವರಿಗೆ ಹಣ, ವಕೀಲರ ನೇಮಕ ಎಲ್ಲ ಮಾಡಿದ್ದು ಕಾಂಗ್ರೆಸ್, ಆ ಸಂದರ್ಭದಲ್ಲಿ ಕೂಡ ಜಮೀರ್ ಹೆಸರು ಕೇಳಿ ಬಂದಿತ್ತು ಎಂದರು.
ಈಗ ಹುಬ್ಬಳ್ಳಿ ಪ್ರಕರಣದಲ್ಲೂ ಜಮೀರ್ ಹೆಸರು ಕೇಳಿ ಬರುತ್ತಿದೆ. ಮಗು ಚಿವುಟಿ ತೊಟ್ಟಿಲು ತೂಗುವ ಕೆಲಸವನ್ನು ಮಾಡುತ್ತಿದ್ದಾರೆ. ಕೋಮುಗಲಭೆ ಹುಟ್ಟುಹಾಕಿ ವೋಟ್ ಬ್ಯಾಂಕ್ ಗಟ್ಟಿಯಾಗಿ ಇಟ್ಟಿಕೊಳ್ಳಲು ಮುಂದಾಗಿದ್ದಾರೆ. ಅವರಿಗೆ ನೆರವು ಕೊಡುವ ಪಾತ್ರ ಕಾಂಗ್ರೆಸ್ನದ್ದು ಇರಬಹುದು ಎಂಬ ಅನುಮಾನಕ್ಕೆ ಸಾಕ್ಷಿ ಒದಗಿಸುವ ರೀತಿ ಜಮೀರ್, ಕಾಂಗ್ರೆಸ್ ನಡುವಳಿಕೆ ಇದೆ ಎಂದಿದ್ದಾರೆ.