ಮೋದಿಗೆ ಧನ್ಯವಾದ, ಆದರೇ “ರಷ್ಯಾ ಅಧ್ಯಕ್ಷರೊಂದಿಗೆ ಮಾತನಾಡುವುದಿಲ್ಲ” – ಝೆಲೆನ್ಸ್ಕಿ
ಪ್ರಧಾನಿ ನರೇಂದ್ರ ಮೋದಿಯವರ ಶಾಂತಿಯ ಕರೆಗೆ ಪ್ರತಿಕ್ರಿಯಿಸಿದ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸುವುದಿಲ್ಲ ಎಂದು ಬುಧವಾರ ಹೇಳಿದ್ದಾರೆ. ಪ್ರಧಾನಿ ಮೋದಿ ನಿನ್ನೆ ಝೆಲೆನ್ಸ್ಕಿ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದರು. ರುಸ್ಸೋ-ಉಕ್ರೇನ್ ಯುದ್ಧದ ಮಧ್ಯೆ ಸಂಭಾವ್ಯ ಪರಮಾಣು ಬೆದರಿಕೆ ವಿಶ್ವದ ಆತಂಕವನ್ನು ಹೆಚ್ಚಿಸಿದೆ, ಹೀಗಾದಾರೆ ಪರಿಸರದ ಮೇಲೆ ಪರಿಣಾಮ ಬೀರಬಹುದು ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ, ಝೆಲೆನ್ಸ್ಕಿ ಅವರ ಜೊತೆ ಮಾತನಾಡುತ್ತಾ ಸಂಘರ್ಷಕ್ಕೆ ಮಿಲಿಟರಿಯಿಂದ ಪರಿಹಾರ ಸಾಧ್ಯವಿಲ್ಲ ಎಂದು ಹೇಳಿದರು. ಉಭಯ ದೇಶಗಳ ನಡುವಿನ ಶಾಂತಿ ಪ್ರಯತ್ನಗಳಿಗೆ ಕೊಡುಗೆ ನೀಡಲು ಭಾರತ ಸಿದ್ಧವಾಗಿದೆ ಎಂದು ಅವರು ತಿಳಿಸಿದರು. ಉಭಯ ದೇಶಗಳ ನಡುವಿನ ಹಗೆತನವನ್ನು ಕೊನೆಗೊಳಿಸಿ ರಾಜತಾಂತ್ರಿಕತೆಯ ಹಾದಿಯನ್ನು ಅನುಸರಿಸುವ ಅಗತ್ಯವಿದೆ ಎಂದು ಅವರು ಮತ್ತೊಮ್ಮೆ ಕರೆ ನೀಡಿದರು.
ಮೋದಿ ಅವರ ಮನವಿಗೆ ಪ್ರತಿಕ್ರಿಯಿಸಿದ ಝೆಲೆನ್ಸ್ಕಿ, ಇಂತಹ ಸಂದರ್ಭದಲ್ಲಿ ಉಕ್ರೇನ್ ಪ್ರಸ್ತುತ ರಷ್ಯಾದ ಅಧ್ಯಕ್ಷರೊಂದಿಗೆ ಯಾವುದೇ ಮಾತುಕತೆ ನಡೆಸುವುದಿಲ್ಲ ಎಂದು ಒತ್ತಿ ಹೇಳಿದರು. ಮಾತುಕತೆಯ ಮೂಲಕ ಶಾಂತಿಯುತ ಪರಿಹಾರಕ್ಕೆ ಉಕ್ರೇನ್ ಯಾವಾಗಲೂ ಬದ್ಧವಾಗಿದೆ ಎಂದು ಅವರು ಪ್ರತಿಪಾದಿಸಿದರು.
ಝೆಲೆನ್ಸ್ಕಿ, “ರಷ್ಯಾ ಎಂದಿಗೂ ಮಾತುಕತೆಗೆ ಮುಂದೆ ಬಂದಿಲ್ಲ. ಅವರು ಉದ್ದೇಶಪೂರ್ವಕವಾಗಿ ಈ ಪ್ರಕ್ರಿಯೆಯನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ನನ್ನ ಭಾಷಣದಲ್ಲಿ, ನಾನು ಶಾಂತಿಗಾಗಿ ನಮ್ಮ ಸ್ಪಷ್ಟ ಸೂತ್ರವನ್ನು ವಿವರಿಸಿದೆ. ನಾವಿಬ್ಬರೂ ಕೆಲಸ ಮಾಡಲು ಸಿದ್ಧರಿದ್ದೇವೆ. ದೇಶಗಳ ನಡುವೆ ಶಾಂತಿಗಾಗಿ ಒಟ್ಟಿಗೆ.” ಎಂದಿದ್ದಾರೆ.
ಉಕ್ರೇನ್‌ನ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆಗೆ ಭಾರತದ ಬೆಂಬಲಕ್ಕಾಗಿ ಝೆಲೆನ್ಸ್ಕಿ ಪ್ರಧಾನಿ ಮೋದಿಯವರಿಗೆ ಧನ್ಯವಾದ ಅರ್ಪಿಸಿದರು. ಪ್ರಧಾನಿ ಮೋದಿಯವರ ಹೇಳಿಕೆ ಬಹಳ ಮುಖ್ಯ ಎಂದು ಬಣ್ಣಿಸಿದ ಅವರು, ಇದು ಯುದ್ಧದ ಸಮಯವಲ್ಲ ಎಂದು ಹೇಳಿದರು.
Zelensky said thanks to PM Modi, said – now will not talk with Russian President Putin