ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಝಿಕಾ ವೈರಸ್ (Zika Virus) ಆತಂಕ ಆರಂಭವಾಗಿದೆ. ನಗರದಲ್ಲಿ ಐವರಿಗೆ ಸೋಂಕು ಕಾಣಿಸಿಕೊಂಡಿದೆ.
ಆನೇಕಲ್ ತಾಲೂಕು, ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಜಿಗಣಿಯಲ್ಲಿ (Jigani) ಎರಡು ವಾರಗಳಲ್ಲಿ ಒಟ್ಟು 5 ಝಿಕಾ ಪ್ರಕರಣಗಳು ಪತ್ತೆಯಾಗಿವೆ. ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೋಗಿಗಳು ಹಾಗೂ ಕುಟುಂಬಸ್ಥರ ರಕ್ತದ ಸ್ಯಾಂಪಲ್ ಗಳನ್ನು ಪಡದುಕೊಂಡು ಆರೋಗ್ಯ ಇಲಾಖೆ ಸೋಂಕಿತರ ಮೇಲೆ ನಿಗಾ ವಹಿಸಿದೆ. ಒಟ್ಟು 7 ಝಿಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರು ಪತ್ತೆಯಾದ ಪ್ರದೇಶಗಳನ್ನು ಕಂಟೋನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ.
ಈಡಿಸ್ ಸೊಳ್ಳೆಯಿಂದ ಝಿಕಾ ವೈರಸ್ ಹರಡುತ್ತದೆ. ಅತಿಯಾದ ತಲೆನೋವು, ಕೆಂಪಾದ ಕಣ್ಣು, ಜ್ವರ, ಮೈಯಲ್ಲಿ ಗುಳ್ಳೆ ದದ್ದುಗಳು ಕಾಣಿಸಿಕೊಳ್ಳುವುದು ಝಿಕಾ ವೈರಸ್ ಗುಣಲಕ್ಷಣಗಳು. ಇಂತಹ ಲಕ್ಷಣಗಳು ಕಂಡುಬಂದಲ್ಲಿ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.








