ಕಾನ್ಪುರದಲ್ಲಿ ಹೆಚ್ಚಿದ ಝಿಕಾ ವೈರಸ್ ಪ್ರಕರಣಗಳು
ಕಾನ್ಪುರ : ಯೋಗಿ ನಾಡು ಉತ್ತರಪ್ರದೇಶದ ಕಾನ್ಪುರದಲ್ಲಿ ಝಿಕಾ ವೈರಸ್ ನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.
ನವೆಂಬರ್ 4 ರಂದು ಕಾನ್ಪುರದಲ್ಲಿ 30 ಜನರಿಗೆ ಝಿಕಾ ವೈರಸ್ ಪತ್ತೆಯಾಗಿದೆ.
ಇದರೊಂದಿಗೆ ಜಿಲ್ಲೆಯಲ್ಲಿ ಝಿಕಾ ಪ್ರಕರಣಗಳ ಸಂಖ್ಯೆ 66ಕ್ಕೆ ಏರಿಕೆ ಆಗಿದೆ.
ಸದ್ಯ ಕಾನ್ಪುರದಲ್ಲಿ ರೋಗ ಹರಡುವುದನ್ನು ತಡೆಯಲು ಮತ್ತು ಮೂಲವನ್ನು ಪತ್ತೆಹಚ್ಚಲು ಆರೋಗ್ಯ ತಂಡಗಳನ್ನು ರಚಿಸಲಾಗಿದೆ.
ಸೊಳ್ಳೆಗಳನ್ನು ನಿಯಂತ್ರಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ.
ರಾಸಾಯನಿಕಗಳನ್ನು ಸಿಂಪಡಿಸಲಾಗುತ್ತಿದೆ. ಗರ್ಭಿಣಿಯರು ಮತ್ತು ಜ್ವರ ಪೀಡಿತರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ.
ಅಲ್ಲದೆ ಆರೋಗ್ಯ ಇಲಾಖೆ ಅಧಿಕಾರಿಗಳು ಮನೆ ಮನೆಗೆ ತೆರಳಿ ಝಿಕಾ ವೈರಸ್ ಬಗ್ಗೆ ಮಾಹಿತಿ ನೀಡುತ್ತಾ ಅರಿವು ಮೂಡಿಸುತ್ತಿದ್ದಾರೆ.
ಝಿಕಾ ವೈರಸ್ ಸೋಂಕು ಸೊಳ್ಳೆಗಳಿಂದ ಹರಡುತ್ತದೆ.
ಉತ್ತರ ಪ್ರದೇಶದ ಕಾನ್ಪುರದಲ್ಲಿ ಅ.23ರಂದು ಮೊದಲ ಬಾರಿಗೆ ವಾಯುಪಡೆ ಅಧಿಕಾರಿಯೊಬ್ಬರಲ್ಲಿ ಝೀಕಾ ಸೋಂಕು ಕಾಣಿಸಿಕೊಂಡಿತ್ತು. ಇದೀಗ 66ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.