ಕೊರೊನಾಗಿಂತ ಝಿಕಾ ವೈರಸ್ ಅಪಾಯಕಾರಿನಾ..? ತಜ್ಞರ ಅಭಿಪ್ರಾಯವೇನು..?
ಕೇರಳ : ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಅದ್ರಲ್ಲೂ ಕೇರಳದಲ್ಲಿ ಕಾಡತೊಡಗಿರುವ ಝಿಕಾ ಸೋಂಕಿನ ಪ್ರಕರಣಗಳ ಸಂಖ್ಯೆಯೂ ಏರಿಕೆಯಾಗುತ್ತಿದ್ದು, ಸದ್ಯ ರಾಜ್ಯದಲ್ಲಿ ಕೊರೊನಾಗಿಂತ ಝಿಕಾ ಸೋಂಕಿನ ಕುರಿತು ಹೆಚ್ಚು ಕಾಳಜಿ ವಹಿಸಬೇಕಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.
ಕೊರೊನಾ ವಿರುದ್ಧದ ಉತ್ತರ ಪ್ರದೇಶದ ಹೋರಾಟವನ್ನು ಶ್ಲಾಘಿಸಿದ ಮೋದಿ
ಮೌಲಾನಾ ಆಜಾದ್ ವೈದ್ಯಕೀಯ ಕಾಲೇಜಿನ ನಿರ್ದೇಶಕ ಹಾಗೂ ಪ್ರೊಫೆಸರ್ ಡಾ. ನರೇಶ್ ಗುಪ್ತಾ ಅವರು, ಝಿಕಾ ವೈರಸ್ ಹರಡುವಿಕೆಯ ಗಂಭೀರತೆ ಕುರಿತು ಆತಂಕ ವ್ಯಕ್ತಪಡಿಸಿದ್ದು, ಈ ಬಗ್ಗೆ ಪ್ರಯೋಗಾಲಯ ವಿಶ್ಲೇಷಣೆ ನಡೆಯಬೇಕಿದೆ ಎಂದು ಹೇಳಿದ್ದಾರೆ.
ಝಿಕಾ ವೈರಸ್ ಗಂಭೀರ ಕಾಳಜಿ ವಹಿಸಬೇಕಾದ ಸೋಂಕಾಗಿದೆ. ಇದು ಸ್ಥಳೀಯವಾಗಿ ಹರಡುತ್ತಿದ್ದು, ಸೋಂಕಿನ ನಿರ್ದಿಷ್ಟ ಸ್ಥಳಗಳಲ್ಲಿ ನಿಗಾ ವಹಿಸುವುದು ಅವಶ್ಯಕವಾಗಿದೆ. ಇದಕ್ಕೆ ಔಷಧ, ನಿರ್ದಿಷ್ಟ ಚಿಕಿತ್ಸೆಯೂ ಇಲ್ಲದ ಕಾರಣ ಸೋಂಕು ಹರಡದಂತೆ ತಡೆಯಬೇಕಿದೆ ಎಂದು ಹೇಳಿದ್ದಾರೆ.
ಗುರುವಾರ ಕೇರಳದಲ್ಲಿ ಮತ್ತೆ ಐದು ಝಿಕಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಏಕಾಏಕಿ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಸಚಿವರು ಅಧಿಕಾರಿಗಳೊಂದಿಗೆ ಸೋಂಕು ನಿರ್ವಹಣೆ ಸಂಬಂಧ ತುರ್ತು ಸಭೆ ನಡೆಸಿದ್ದಾರೆ.
ಕೇರಳದಲ್ಲಿ 24 ವರ್ಷದ ಮಹಿಳೆಯೊಬ್ಬರಲ್ಲಿ ಮೊದಲು ಝಿಕಾ ಸೋಂಕಿನ ಪ್ರಕರಣ ಪತ್ತೆಯಾಗಿತ್ತು. ನಂತರ ಹತ್ತು ಜನರಲ್ಲಿ ವೈರಸ್ ಪತ್ತೆಯಾಗಿದ್ದು, ಇದೀಗ ಒಟ್ಟಾರೆ ಪ್ರಕರಣಗಳ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಗರ್ಭಿಣಿಯರಿಗೆ ಈ ಸೋಂಕು ಅಪಾಯಕಾರಿ ಎನ್ನಲಾಗಿದೆ. ಈ ಸೋಂಕಿನಿಂದ ಮರಣ ಸಂಭವಿಸುವ ಸಾಧ್ಯತೆ ಕಡಿಮೆ ಎಂದು ತಜ್ಞರು ಮಾಹಿತಿ ನೀಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.