Zimbabwe vs India | ಜಿಂಬಾಬ್ವೆ ವಿರುದ್ಧ ಸರಣಿಗೆ ರಾಹುಲ್ ನಾಯಕ
ಜಿಂಬಾಬ್ವೆ ವಿರುದ್ಧದ ಏಕದಿನ ಸರಣಿಗೆ ಬಿಸಿಸಿಐ ಭಾರತ ಕ್ರಿಕೆಟ್ ತಂಡವನ್ನು ಪ್ರಕಟಿಸಿದ್ದು, ಕೆ.ಎಲ್.ರಾಹಲ್ ತಂಡವನ್ನು ಮುನ್ನಡೆಸಲಿದ್ದಾರೆ.
ಈ ಹಿಂದೆ ಶಿಖರ್ ಧವನ್ ಅವರನ್ನು ಈ ಪ್ರವಾಸಕ್ಕೆ ತಂಡದ ನಾಯಕರನ್ನಾಗಿ ಮಾಡಲಾಗಿತ್ತು, ಆದರೆ ಇದೀಗ ಬಿಸಿಸಿಐ ಕೆಎಲ್ ರಾಹುಲ್ ಅವರಿಗೆ ಪಟ್ಟ ಕಟ್ಟಿದೆ.
ದಕ್ಷಿಣ ಆಫ್ರಿಕಾ ಸರಣಿ ವೇಳೆ ಕೆಎಲ್ ರಾಹುಲ್ ಮೊದಲು ಗಾಯಗೊಂಡರು.
ಬಳಿಕ ಚೇತರಿಸಿಕೊಂಡು ವೆಸ್ಟ್ ಇಂಡೀಸ್ ಸರಣಿಗೆ ಸನ್ನದ್ಧವಾಗುವ ವೇಳೆ ಕೊರೊನಾ ಸೋಂಕಿಗೆ ತುತ್ತಾಗಿದ್ದರು.
ಈ ಕಾರಣದಿಂದಾಗಿ ಅವರು ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯನ್ನು ಆಡಲು ಸಾಧ್ಯವಾಗಲಿಲ್ಲ.

ಮೇ ತಿಂಗಳಿನಲ್ಲಿ ಬೆಂಗಳೂರು ವಿರುದ್ಧ ಐಪಿಎಲ್‌ನಲ್ಲಿ ರಾಹುಲ್ ತಮ್ಮ ಕೊನೆಯ ಪಂದ್ಯವನ್ನು ಆಡಿದರು, ಇದರಲ್ಲಿ ಅವರು 79 ರನ್ ಗಳಿಸಿದರು.
ಭಾರತ ಕ್ರಿಕೆಟ್ ತಂಡ ಹೀಗಿದೆ :
ಕೆಎಲ್ ರಾಹುಲ್ (ನಾಯಕ), ಶಿಖರ್ ಧವನ್ (ಉಪನಾಯಕ), ರಿತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್.